Breaking News

ಸಿಎಂ ಇಬ್ರಾಹಿಂ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ.ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 ಶಾಸಕರು ಕಾಂಗ್ರೆಸ್ ಬೇಡ ಅಂತ ಬಿಜೆಪಿ ಸೇರಿದರು. ಮೊದಲು ಅವರ ಶಾಸಕರನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿ ಎಂದು ತಿರುಗೇಟು ನೀಡಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *