ಬಳ್ಳಾರಿ: ಜಾನುವಾರುಗಳ ರಕ್ಷಣೆ ಹಾಗೂ ಸಂರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಸುಸಜ್ಜಿತವಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಈ ಕ್ಲಿನಿಕ್ ಉದ್ಘಾಟನೆಗೊಂಡಿದ್ದು, ಇದರ ಸದುಪಯೋಗವನ್ನು ನಮ್ಮ ರೈತ ಬಾಂಧವರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಪಶು ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡ ಪಾಲಿಕ್ಲೀನಿಕ್ ಕಟ್ಟಡಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ವೀರಶೇಖರ್ ರೆಡ್ಡಿ, ಶ್ರೀನಿವಾಸ್ ಮೋತ್ಕರ್, ಕೃಷ್ಣಾ ರೆಡ್ಡಿ, ಸೇರಿದಂತೆ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

