ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಲಾಗಿದೆ.
ಪ್ರಾಯೋಗಿಕವಾಗಿ 100 ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆ ವತಿಯಿಂದ ಸಮವಸ್ತ್ರ ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲಾಗುವುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

