ಬೆಂಗಳೂರು: ಉಡುಪಿ ಜಿಲ್ಲೆಯ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು RSS ವಿಎಎರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ’ ಅಂತಾ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

