ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು.
ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

