ಕೊರೊನಾದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ.
92 ವರ್ಷದ ಲತಾ ಮಂಗೇಶ್ಕರ್ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ತಿಳಿದುಬಂದಿದೆ.
ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರ ತಂಡ ಹೇಳಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಕುಟುಂಬ ಸದಸ್ಯರೂ ಸಹ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

