Breaking News

ಹಿಜಾದ್ ವಿವಾದ ಕುರಿತು ಮಹತ್ವದ ತೀರ್ಮಾನ ಮಾಡಿದ ರಾಜ್ಯ ಸರ್ಕಾರ


ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವರ್ಸರ್ ಕೇಸರಿ ಶಾಲು ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಸಮವಸ್ತ್ರ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ. ಅದೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪದ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲಾ ಶಆಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದ್ರೇ ಕೆಲವು ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಧರ್ಮ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡು ಬರುತ್ತಿದ್ದು, ಇದರಿಂದ ಶಾಲಾ-ಕಾಲೇಜುಗಳಲ್ಲಿ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದು ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *