ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾಧವರಂ ಬಳಿ ಸಂಭವಿಸಿದೆ.
ಮೃತರನ್ನು 37 ವರ್ಷದ ರಾಘವೇಂದ್ರ ಹಾಗೂ 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ರೈಲಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ರಾಯರ ಮಠಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಮಾಧವರಂ ಬಳಿ ಆಟೋ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಮಾಧವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

