ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ನಗರದ ಪಾರ್ಕ್ ನಲ್ಲಿ ನಿರ್ಮಿಸಲಾಗಿದ್ದ, ಕಂಚಿನ ಪುತ್ಥಳಿಯನ್ನೇ ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿ ಯೋಗೇಶ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ, ಅಮೃತ ಹಳ್ಳಿ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

