ಮುಂಬೈ: ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಭಾನುವಾರ ಸಂಜೆ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವದ ಜೊತೆಗೆ ಲತಾರ ಅಂತ್ಯ ಸಂಸ್ಕಾರವನ್ನು ನಡೆಸಲಾಗಿದೆ.
ಲತಾ ಮಂಗೇಶ್ಕರ್ ಅವರ ನಿಧನದಿಂದ ಭಾರತ ಇಂದು ತನ್ನ ಶ್ರೇಷ್ಠ ರತ್ನಗಳಲ್ಲಿ ಒಂದನ್ನು ಕಳೆದುಕೊಂಡಿದೆ.
ಭಾರತ ಸರ್ಕಾರವು ಮೆಲೋಡಿ ಕ್ವೀನ್ ಎಂದೇ ಪ್ರಸಿದ್ಧವಾದ ಲತಾ ಮಂಗೇಶ್ಕರ್ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. “ಇಂದು ಮತ್ತು ನಾಳೆ ಎರಡು ದಿನಗಳ ರಾಜ್ಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ, ಈ ಸಮಯದಲ್ಲಿ ಲತಾ ಮಂಗೇಶ್ಕರ್ ಗೌರವಾರ್ಥವಾಗಿ ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುತ್ತದೆ,” ಎಂದು ಭಾರತ ಸರ್ಕಾರ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

