ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಹಿಳೆಯರ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿಗೆ ಚಾಲನೆ ನೀಡಿದ್ದರು. ಇಂದು ರಾಜ್ಯಾಧ್ಯಂತ ವಿದ್ಯುಕ್ತವಾಗಿ ಉದ್ಘಾಟನೆ ಗೊಳ್ಳುವಂತೆ ದಿನಾಂಕ ನಿಗದಿ ಪಡಿಸಲಾಗಿತ್ತು. ಆದ್ರೇ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನದ ಹಿನ್ನಲೆಯಲ್ಲಿ ಎರಡು ದಿನ ಶೋಕಾಚರಣೆಯನ್ನು ರಾಜ್ಯಾಧ್ಯಂತ ಘೋಷಣೆ ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಇಂದು ಉದ್ಘಾಟನೆಗೊಳ್ಳಬೇಕದ್ದಂತ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ ಕಾರ್ಯಕ್ರಮ ಫೆಬ್ರವರಿ 8ರ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಾಳೆ ಫೆ.7 ರಂದು ನಡೆಯಬೇಕಿದ್ದ ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಉದ್ಘಾಟನಾ ಸಮಾರಂಭವನ್ನು ಗಾಯಕಿ ಲತಾ ಮಂಗೇಶ್ಕರ್ ನಿಧನದ ಶೋಕಾಚರಣೆ ಹಿನ್ನೆಲೆಯಲ್ಲಿ ಫೆಬ್ರವರಿ 8 ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ 11-30 ಕ್ಕೆ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

