ಕೊರೊನಾ ಬಲಿಯಾದ ಸ್ನೇಹಿತನ ಪತ್ನಿಯನ್ನು ವರಿಸುವ ಮೂಲಕ ಆಕೆಗೆ ಬಾಳು ಕೊಟ್ಟು ಆದರ್ಶ ಮೆರೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಹನೂರಿನ ಅಂಬಿಕಾ ಕಳೆದ 8 ವರ್ಷಗಳ ಹಿಂದೆ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದ ಚೇತನ್ ಕುಮಾರ್ ಅವರನ್ನು ಮದುವೆಯಾಗಿದ್ದರು. ಚೇತನ್ ಬೆಂಗಳೂರಿನಲ್ಲಿ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸದಲ್ಲಿದ್ದರು. ಆದರೆ ಕೊವಿಡ್ 2ನೇ ಅಲೆಯಲ್ಲಿ ಚೇತನ್ ಮೃತಪಟ್ಟಿದ್ದ.
ಚಾಮರಾಜನಗರ ತಾಲ್ಲೂಕಿನ ನಂಜದೇವನಪುರ ಗ್ರಾಮದ ಲೋಕೇಶ್ ಗೆಳೆಯನ ಪತ್ನಿಯನ್ನು ಮದುವೆಯಾದ ಯುವಕ. ಲೋಕೇಶ್ ಹಾಗೂ ಅಂಬಿಕಾ ಬೆಂಗಳೂರಿನ ಸರ್ಪಭೂಷಣ ಮಠದಲ್ಲಿ ಇತ್ತೀಚೆಗೆ ಮದುವೆಯಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ಅಂಬಿಕಾ ಗಂಡನನ್ನ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು. ಆ ಆಸರೆಗೆ ಬಂದ ಲೋಕೇಶ್, ಎರಡೂ ಮನೆಯವರನ್ನೂ ಒಪ್ಪಿಸಿ ಅಂಬಿಕಾರನ್ನು ಮದುವೆಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

