ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ ಒಟ್ಟು 6151 ಜನರಲ್ಲಿ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ.
ಕೊವಿಡ್ನಿಂದ ಒಟ್ಟು 49 ಜನರು ಸಾವನಪ್ಪಿದ್ದಾರೆ. ಒಟ್ಟು 16,802 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 87,080 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 6.19, ಸೋಂಕಿತರ ಸಾವಿನ ಸರಾಸರಿ ಶೇ 0.79 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 39,02,309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 37,75,799 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 39,396 ಜನರು ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

