ಮಂಗಳೂರು : ಹಿಜಾಬ್ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,
ಪ್ರಸ್ತುತ ಜನರಿಗೆ ಬೇಕಾಗಿರುವುದು ಆರ್ಥಿಕ ಭದ್ರತೆ, ಉದ್ಯೋಗ, ನೆಮ್ಮದಿಯ ಬದುಕು. ಜನತೆಯ ಈ ಆಶೋತ್ತರಗಳನ್ನು ಈಡೇರಿಸುವುದೇ ಕಾಂಗ್ರೆಸ್‌ನ ಗುರಿ. ನಾವು ಆದ್ಯತೆ ನೀಡುವುದು ಇದಕ್ಕೆ. ಆದರೆ ಬಿಜೆಪಿಗೆ ಈ ಆದ್ಯತೆಗಳು ಬೇಕಾಗಿಲ್ಲ . ಅವರ ಗಮನ ಇರುವುದು ಮತೀಯ ಭಾವನೆಗಳನ್ನು ಕೆರಳಿಸಿ ಅರಾಜಕತೆ ಸೃಷ್ಟಿಸುವುದು. ವಿದ್ಯಾರ್ಥಿಗಳಲ್ಲಿ, ಜನರಲ್ಲಿ ಮತೀಯ ಭಾವನೆಯ ವಿಷಬೀಜವನ್ನು ಬಿತ್ತುವ ಷಡ್ಯಂತ್ರ ಆನೇಕರಿಂದ ನಡೆಯುತ್ತಿದ್ದು ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

