Breaking News

ಎಸ್‌ಪಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ಕನಸು ನನಸು


ಲಖನೌ: ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿಕೂಟದ ವಿರುದ್ಧದ ವಾಗ್ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ‍ನಾಥ ಅವರು ಇನ್ನಷ್ಟು ಹರಿತಗೊಳಿಸಿದ್ದಾರೆ.

ಎಸ್‌ಪಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ಕನಸು ನನಸಾದಂತಾಗುತ್ತದೆ ಎಂದು ಮೋದಿ ಆಪಾದಿಸಿದರೆ, ಎಸ್‌ಪಿಯಲ್ಲಿರುವವರು ‘ಕಳ್ಳರು’ ಎಂದು ಯೋಗಿ ಹೇಳಿದ್ದಾರೆ.

‘ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಸುರಕ್ಷಿತವಾಗಿರುತ್ತೀರಿ. ಎಸ್‌ಪಿ ಅಧಿಕಾರಕ್ಕೆ ಬಂದರೆ ಗೂಂಡಾಗಳ ಕನಸು ನನಸಾಗುತ್ತದೆ’ ಎಂದು ವರ್ಚುವಲ್‌ ರ‍್ಯಾಲಿಯಲ್ಲಿ ಮೋದಿ ಅವರು ಹೇಳಿದ್ದಾರೆ.

ಆದಿತ್ಯನಾಥ ನೇತೃತ್ವದ ಸರ್ಕಾರವು ಜೈಲಿಗೆ ಕಳುಹಿಸಿದ ಅಪರಾಧಿಗಳು ರಾಜ್ಯದಲ್ಲಿ ಸರ್ಕಾರ ಬದಲಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಸರ್ಕಾರ ಬದಲಾದರೆ ಅವರೆಲ್ಲರೂ ಜೈಲಿನಿಂದ ಹೊರಗೆ ಬಂದು ಲೂಟಿ ಮತ್ತು ದರೋಡೆಯ ತಮ್ಮ ಕಾರ್ಯಚಟುವಟಿಕೆ ಮುಂದುವರಿಸುತ್ತಾರೆ ಎಂದು ಮೋದಿ ಆಪಾದಿಸಿದ್ದಾರೆ.

ಈ ಅಪರಾಧಿಗಳ ಸಹಚರರು ಅಧಿಕಾರಕ್ಕೆ ಬರುವುದಕ್ಕಾಗಿ ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುತ್ತಿದ್ದಾರೆ. ಇಂತಹ ಷಡ್ಯಂತ್ರಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮೋದಿ ಹೇಳಿದ್ದಾರೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *