Breaking News

ಟಿಪ್ಪರ್, ಬೈಕ್ ನಡುವೆ ಅಪಘಾತ : ವಾಹನ ಸವಾರ ಅಪಾಯದಿಂದ ಪಾರು

ನವಲಗುಂದ: ಪಟ್ಟಣದ ನೀಲಮ್ಮನ ಕೆರೆ ಎದುರು ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಅಣ್ಣಿಗೇರಿಯತ್ತ ಹೊರಟ ಟಿಪ್ಪರ್‌ವೊಂದು ಪಟ್ಟಣದ ನೀಲಮ್ಮನ ಕೆರೆ ಎದುರು ಇರುವ ಕ್ರಾಸ್ ಬಳಿ ತಿರುಗುವ ಸಂದರ್ಭದಲ್ಲಿ ಏಕಾಏಕಿ ಬೈಕ್ ಮೇಲೆ ಹರಿದಿದೆ. ತಕ್ಷಣವೇ ಸವಾರ ಬೈಕ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಮಠಪತಿ ಭೇಟಿ ನೀಡಿ, ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *