Breaking News

ತನ್ವೀರ್‌ಸೇಠ್ ಆಸ್ಪತ್ರೆಗೆ ದಾಖಲು


ಮೈಸೂರು: ನಗರದ ತಮ್ಮ ಮನೆಯಲ್ಲಿ ಅಸ್ವಸ್ಥರಾದ ಶಾಸಕ ತನ್ವೀರ್‌ಸೇಠ್ ಅವರನ್ನು ಇಲ್ಲಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶೆಣೈ, ‘ಅಸಿಟಿಡಿ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ಬಂದರು. ಕೆಲವೊಂದು ಪರೀಕ್ಷೆಗಳನ್ನು ಮಾಡಬೇಕಿರುವುದರಿಂದ ಒಂದು ದಿನದ ಮಟ್ಟಿಗೆ ದಾಖಲಿಸಿಕೊಳ್ಳಲಾಗಿದೆ. ಸದ್ಯ, ಅವರು ಸಾಮಾನ್ಯ ವಾರ್ಡ್‌ನಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ಹೇಳಿದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *