ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಕೊರೋನಾ ಸೋಂಕು ಪರೀಕ್ಷೆಗಳು ನಡೆದಿದ್ದು, ಹೊಸ ಪ್ರಕರಣಗಳು ಕೂಡಾ ಆರು ಸಾವಿರಕ್ಕೆ ಕುಸಿದಿವೆ. ಇದು 1 ತಿಂಗಳ ಕನಿಷ್ಠ. ಸೋಂಕಿತರ ಸಾವು ಮಾತ್ರ ಐವತ್ತರ ಆಸುಪಾಸಿನಲ್ಲಿಯೇ ಮುಂದುವರೆದಿದೆ.
ಸೋಮವಾರ 6,151 ಮಂದಿ ಸೋಂಕಿತರಾಗಿದ್ದು, 49 ಸೋಂಕಿತರು ಸಾವಿಗೀಡಾಗಿದ್ದಾರೆ. 16,802 ಮಂದಿ ಗುಣಮುಖರಾಗಿದ್ದಾರೆ. ಸದ್ಯ 87 ಸಾವಿರ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 99 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ.6 ರಷ್ಟು ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

