ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಇದ್ರಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಇನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡ ಭಾಗಿಯಾಗಲಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಬಗ್ಗೆ ಮಹತ್ವದ ಚರ್ಚೆ ನಡೆಸುವ ಸಲುವಾಗಿ ಇಂದು 7 ಗಂಟೆಗೆ ಗೃಹ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ನಾಳೆ (ಫೆ.9) ರಾಜ್ಯ ಸಚಿವ ಸಂಪುಟದ ಸಭೆ ನಿಗದಿಯಾಗಿದೆ ಎಂದು ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

