ಬೆಂಗಳೂರು: ಕಾಲೇಜು ಕ್ಯಾಂಪಸ್ನಲ್ಲಿ ಹಿಜಾಬ್ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ.ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

