Breaking News

ಹಿಜಾಬ್‌ ವಿವಾದಕ್ಕೆ ಶಿಕ್ಷಣ ಸಚಿವ, ಗೃಹ ಸಚಿವರೇ ಕಾರಣ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಹಿಜಾಬ್‌-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *