ಮಂಡ್ಯ: ತಾಯಿ ಸೇರಿದಂತೆ ನಾಲ್ವರು ಮಕ್ಕಳು ಒಟ್ಟು ಒಂದೇ ಕುಟುಂಬದ ಐವರ ಕೊಲೆ ಪ್ರಕರಣ ಫೆಬ್ರವರಿ 6ರ ಮಧ್ಯರಾತ್ರಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಮಲಗಿದ್ದ ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4) ಹಾಗೂ ಗೋವಿಂದ(8) ನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಬಳಿಕ ಸ್ಕೂಟರ್ನಲ್ಲಿ ಪರಾರಿಯಾಗಿದ್ದಳು.
ಮಾರನೇ ದಿನ ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಾನೂ ಮೃತರ ಮನೆಯ ಮುಂದೆ ಕೂತು ಕಣ್ಣೀರಿಟ್ಟು ಗೋಳಾಡಿ ನಾಟಕವಾಡಿದ್ದಳು. ಸದ್ಯ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಆಧರಿಸಿ ಕೆಆರ್ಎಸ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಲಕ್ಷ್ಮೀ, ಮೃತ ಲಕ್ಷ್ಮೀಯ ಗಂಡ ಗಂಗಾರಾಮ್ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ತನ್ನ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಮಕ್ಕಳನ್ನೂ ಸೇರಿ ಐವರನ್ನು ಭೀಕರವಾಗಿ ಹತ್ಯೆ ಮಾಡಿದ್ದರು ಎನ್ನಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ ಬಂಧಿತ ಆರೋಪಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

