Breaking News

ಹಿಜಾಬ್ ವಿವಾದ : ಫೆ. 22ರವರೆಗೆ ಶಾಲಾ-ಕಾಲೇಜು ಬಂದ್


ಬೆಂಗಳೂರು : ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್ವರೆಗೆ ಜನರು ಗುಂಪುಗೂಡದಂತೆ ಇಂದಿನಿಂದ ಫೆಬ್ರುವರಿ.22ರವರೆಗೆ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಕಳೆದೆರಡು ದಿನಗಳಿಂದ ಶಿವಮೊಗ್ಗ, ಉಡುಪಿ ಸೇರಿದಂತೆ ಕೆಲ ಶಾಲಾ-ಕಾಲೇಜುಗಳ ಮುಂದೆ ಹಿಜಾಬ್-ಕೇಸರಿ ವಿಚಾರವಾಗಿ ಸಂಘರ್ಷಕ್ಕೆ ಕಾರಣವಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನಗಳ ಕಾಲ ಸರ್ಕಾರ ರಜೆ ಘೋಷಿಸಿದೆ. ಇದರ ಬೆನ್ನೆಲ್ಲೆ ಪೊಲೀಸ್ ಆಯುಕ್ತರು 144 ಸೆಕ್ಷನ್ ಜಾರಿ ಮಾಡಿದ್ದಾರೆ.

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ನಗರದಲ್ಲಿರುವ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *