ಚಾಮರಾಜನಗರ: ತಾಲೂಕಿನ ಬಾಣಳ್ಳಿ ಗೇಟ್ ಬಳಿಯಲ್ಲಿ ಕಳೆದ ರಾತ್ರಿ ಕೊಳ್ಳೇಗಾಲದ ಮಾಜಿ ಶಾಸಕ ಎಸ್ ಬಾಲರಾಜು ಅವರ ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮದಿಂದಾಗಿ ಮಾಜಿ ಶಾಸಕ ಬಾಲರಾಜು ಹಾಗೂ ಕಾರು ಚಾಲಕ ಮೋಹನ್ ಮತ್ತು ಕ್ಲೀನರ್ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಈ ಅಪಘಾತದಲ್ಲಿ ಮಾಜಿ ಶಾಸಕ ಸೇರಿ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಮಾಜಿ ಶಾಸಕ ಎಸ್ ಬಾಲರಾಜು ಪ್ರಾಣಾಪಾಯದಿಂದ ಪಾರಾಗಿದ್ದರೇ, ಕಾರು ಚಾಲಕ ಮೋಹನ್, ಕ್ಲೀನರ್ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

