Breaking News

ಬಜೆಟ್ 2022: ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ಪೂರ್ವಭಾವಿ ಸಭೆಯನ್ನು ಆರಂಭಿಸಿದ್ದಾರೆ.

ಈಗಾಗಲೇ ಕಂದಾಯ ಇಲಾಖೆ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಲೋಕೋಪಯೋಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜೊತೆಗೆ ಸಿಎಂ ಸಭೆ ನಡೆಸಿ, ಪ್ರಸ್ತಾವನೆ, ಬೇಡಿಕೆಗಳನ್ನು ಆಲಿಸಿದ್ದಾರೆ.

ನಿನ್ನೆ 8 ಇಲಾಖೆಯೊಂದಿಗೆ ಸಭೆ ನಡೆಸಿದಂತ ಅವರು, ಇಂದು 12 ಇಲಾಖೆಗಳೊಂದಿಗೆ ಬಜೆಟ್ ತಯಾರಿಯ ಪೂರ್ವಭಾವಿ ಸಭೆಯನ್ನ ನಡೆಸಲಿದ್ದಾರೆ.

ಈ ಬಳಿಕ, ಇಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ, ಕಾರ್ಮಿಕ, ಸಾರಿಗೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ, ಪೌರಾಡಳಿತ ಹಾಗೂ ಕೃಷಿ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ. ಈ ಇಲಾಖೆಗಳ ಪ್ರಸ್ತಾವನೆ ಮತ್ತು ಬೇಡಿಕೆಗಳ ಬಗ್ಗೆ ಆಲಿಸಲಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *