ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಎಂಬಲ್ಲಿ 23 ವರ್ಷದ ಯುವಕನಿಗೆ ಮೊಳೆಯಿಂದ ಇರಿದು ಘಾಸಿಗೊಳಿಸಲಾಗಿದೆ. ಅಲ್ಲದೆ, ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ ಜತೆ ಪೊಲೀಸರು ಸಭೆ ನಡೆಸಿದ್ದಾರೆ.
ಒಂದು ಗುಂಪಿನವರಿಂದ ಹಲ್ಲೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ನಿನ್ನೆ ಹರಿಹರ, ದಾವಣಗೆರೆಗೆ ಸೀಮಿತವಾಗಿದ್ದ ನಿಷೇಧಾಜ್ಞೆ ಇಂದು ಹರಿಹರ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮಹಾಂತೇಶ ಬೀಳಗಿ ಆದೇಶ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

