Breaking News

ಕರ್ನಾಟಕದಲ್ಲಿ 5,339 ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 5 ಸಾವಿರಕ್ಕೂ ಕಡಿಮೆ ಕೇಸ್ ಪತ್ತೆಯಾಗಿದ್ದಂತ ಕೊರೋನಾ ಕೇಸ್ , ಇಂದು ಕೊಂಚ ಏರಿಕೆಯಾಗಿದೆ. ಈ ಮೂಲಕ ರಾಜ್ಯಾಧ್ಯಂತ ಕೋವಿಡ್ ಹಾವು-ಏಣಿಯಾಟ ಮುಂದುವರೆದಿದೆ. ಇಂದು 5,339 ಮಂದಿಗೆ ಕೋವಿಡ್  ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಕಳೆದ 24 ಗಂಟೆಯಲ್ಲಿ 1,28,705 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 2,161 ಸೇರಿ ಕರ್ನಾಟಕದಲ್ಲಿ 5,339 ಮಂದಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *