Breaking News

ಬಿಜೆಪಿ ಕಚೇರಿ ಮೇಲೆ ದಾಳಿ : ಸಿಸಿಟಿವಿ ದೃಶ್ಯಾವಳಿ ಸೇರೆ

ಚೆನ್ನೈ: ದುಷ್ಕರ್ಮಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ದುಷ್ಕರ್ಮಿಗಳು ಪೊಲೀಸರ ದಾರಿ ತಪ್ಪಿಸಿ ಪರಾರಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

‘ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. 15 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು ಅದರಲ್ಲಿ ಡಿಎಂಕೆ ಪಾತ್ರವಿದೆ. ಈ ಘಟನೆಗೆ ತಮಿಳುನಾಡು ಸರ್ಕಾರದ ನಡೆಯನ್ನು ನಾವು ಖಂಡಿಸುತ್ತೇವೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ, ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರುವುದಿಲ್ಲ” ಎಂದು ಘಟನೆ ಕುರಿತು ಬಿಜೆಪಿ ಸದಸ್ಯ ಕರಾಟೆ ತ್ಯಾಗರಾಜನ್ ಹೇಳಿಕೆ ನೀಡಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *