ಬೆಂಗಳೂರು: ಕರ್ನಾಟಕ ಅಂಚೆ ವೃತ್ತದ ನೂತನ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಆಗಿ ಎಸ್. ರಾಜೇಂದ್ರ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಅವರು, ತೆಲಂಗಾಣ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರ್ ಆಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರಿನವರಾದ ಅವರು, 1990ನೇ ಸಾಲಿನ ಭಾರತೀಯ ಅಂಚೆ ಸೇವೆಯ ಅಧಿಕಾರಿಯಾಗಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ಲೋಹ ವಿಜ್ಞಾನದಲ್ಲಿ ಬಿ.ಟೆಕ್. ಪದವಿ ಪಡೆದಿರುವ ಅವರು, 1987ರಿಂದ 1990ರವರೆಗೆ ಬಿಎಚ್‌ಇಎಲ್‌ನ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಸಂಶೋಧನಾ ಎಂಜಿನಿಯರ್ ಆಗಿ ಅವರು ವೃತ್ತಿ ಜೀವನವನ್ನು ಆರಂಭಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

