Breaking News

ಪ್ರಧಾನಿ ವಿರುದ್ಧ ಸ್ಟಾಲಿನ್ ವಾಗ್ದಾಳಿ


ಬಿಜೆಪಿ ವಿರುದ್ಧದ ಟೀಕೆಗಳನ್ನು ದೇಶದ ವಿರುದ್ಧ ಟೀಕೆಗಳನ್ನಾಗಿ ಕಾಣುವಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಪಾದನೆ ಮಾಡಿದ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಗಣತಂತ್ರೋತ್ಸವದ ದಿನದಂದು ತಮಿಳು ನಾಡಿದ ಸ್ತಬ್ಧಚಿತ್ರವನ್ನು ಪೆರೇಡ್‌ನಲ್ಲಿ ಭಾಗವಹಿಸಲು ಬಿಡದೇ ಇದ್ದದ್ದಕ್ಕೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಸ್ವಾತಂತ್ರ‍್ಯ ಹೋರಾಟಗಾರರ ಪ್ರತಿಮೆಗಳನ್ನು ಈ ಬಾರಿ ಗಣತಂತ್ರೋತ್ಸವದ ಪರೇಡ್‌ನಲ್ಲಿ ರಾಜ್ಯದ ಪರವಾಗಿ ಸ್ತಬ್ದಚಿತ್ರವನ್ನಾಗಿ ಮೆರವಣಿಗೆ ಮಾಡಲು ಸ್ಟಾಲಿನ್ ಸರ್ಕಾರ ನಿರ್ಧರಿಸಿತ್ತು.

ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಸ್ಟಾಲಿನ್, ಡಿಎಂಕೆ ಪರ ಮತಯಾಚನೆ ಮಾಡುತ್ತಾ, ತಮಿಳರಿಗೆ ಮೋದಿ ರಾಷ್ಟ್ರಪ್ರೇಮದ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ ಎಂದಿದ್ದು, ಸ್ವಾತಂತ್ರ‍್ಯ ಹೋರಾಟದಲ್ಲಿ ತಮಿಳರ ಕೊಡುಗೆಗಳು ಏನೆಂದು ಚೆನ್ನಾಗಿ ದಾಖಲಾಗಿವೆ ಎಂದಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *