ಥಾಣೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹೂಡಿರುವ ಮಾನನಷ್ಟ ಮೊಕದ್ದಮೆ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 22ಕ್ಕೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನ್ಯಾಯಾಲಯ ಮುಂದೂಡಿದೆ.
2014ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಭಿವಂಡಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಆರ್‌ಎಸ್‌ಎಸ್ನವರು ಎಂದು ಹೇಳಿಕೆ ನೀಡಿದ್ದರು.
ಇದನ್ನು ಖಂಡಿಸಿ ಆರ್‌ಎಸ್‌ಎಸ್ನ ರಾಜೇಶ್ ಕುಂಟೆ ಅವರು ರಾಹುಲ್ ಗಾಂಧಿ ವಿರುದ್ಧ ಭಿವಂಡಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಅವರ ಹೇಳಿಕೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಕಳಂಕ ತಂದಿದೆ ಎಂದು ರಾಜೇಶ್ ಕುಂಟೆ ಆರೋಪಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

