Breaking News

ಹಿಜಾಬ್ ವಿವಾದ ಕುರಿತು ಮಹತ್ವದ ತೀರ್ಮಾನ ನೀಡಿದ ಹೈಕೋರ್ಟ್


ಬೆಂಗಳೂರು: ಹಿಜಾಬ್ ವಿವಾದ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೀಠ ಬುಧವಾರ ಸಿಜೆ ಅಂಗಳಕ್ಕೆ ರವಾನಿಸಿದ ಬೆನ್ನಲ್ಲೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೂ ಸೇರಿ ಮೂವರು ನ್ಯಾಯ ಮೂರ್ತಿಗಳನ್ನೊಳಗೊಂಡ ಪೂರ್ಣಪೀಠ ರಚನೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರನ್ನೊಳಗೊಂಡ ಈ ಪೂರ್ಣಪೀಠ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇಂದು ನಡೆಸಿದೆ.

ಸದ್ಯ ಪ್ರಕರಣ ಸಂಬಂಧ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವ ವಿಚಾರವಾಗಿ ಪ್ರಸ್ತಾಪಿಸಿದ ಪೂರ್ಣಪೀಠ, ಶಾಲೆ-ಕಾಲೇಜುಗಳನ್ನು ಆರಂಭಿಸುವಂತೆ ಸೂಚನೆ ನೀಡಿದೆ. ಆದರೆ ಪ್ರಕರಣ ಇನ್ನೂ ಇತ್ಯರ್ಥವಾಗದ್ದರಿಂದ ಮುಂದಿನ ಆದೇಶದವರೆಗೂ ಯಾವ ವಿದ್ಯಾರ್ಥಿಗೂ ಹಿಜಾಬ್​ ಅಥವಾ ಕೇಸರಿ ಶಾಲು ಸೇರಿ ಧಾರ್ಮಿಕ ಉಡುಪು ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ಹೇಳಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *