ಬೆಂಗಳೂರು: ಕೋವಿಡ್ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಬೋಧನಾ ಕಾರ್ಯ ಅಪೂರ್ಣವಾಗಿರುವ ಕಾರಣ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡುವಂತೆ ಕೋರಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಅವರು ಪತ್ರ ಬರೆದಿದ್ದಾರೆ.
‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡುವಂತೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ನಿರ್ದೇಶಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

