Breaking News

ಗೊಮ್ಮಟೇಶ್ವರ ಮೂರ್ತಿ ಅವಹೇಳನಕಾರಿ ಮಾತು : ಮೈಸೂರುನಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು: ನಗರದಲ್ಲಿ ಫೆ. 11ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಎಲ್ಲ ರೀತಿಯ ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇಧಿಸಿ ಕಮಿಷನರ್ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

‘ಗೊಮ್ಮಟೇಶ್ವರ ಮೂರ್ತಿ ಕುರಿತು ದಿ ನ್ಯೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಯೂಬ್‌ಖಾನ್‌ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾಗೆ ಕರೆ ನೀಡಿರುವ ಸಂದೇಶ ವೈರಲ್‌ ಆಗಿರುವುದು ಹಾಗೂ ಹಿಜಾಬ್‌ ಬೆಂಬಲಿಸಿ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂಬ ವದಂತಿ ಆಧರಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *