Breaking News

ಹಿಜಾಬ್ ವಿವಾದ ನ್ಯಾಯಾಲಯ ತೀರ್ಪುಗೆ ಸರ್ಕಾರ ಬದ್ದರಾಗಬೇಕು: ಸಭಾಪತಿ ಹೊರಟ್ಟಿ

ಹುಬ್ಬಳ್ಳಿ : ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ.ನ್ಯಾಯಾಲಯದ ಬಗ್ಗೆ ನಾವು ಮಾತನಾಡಕ್ಕೆ ಆಗಲ್ಲಾ, ಏನು ತೀರ್ಪು ಬರತ್ತೋ ಅದನ್ನು ಸರ್ಕಾರ ಪಾಲಿಸಬೇಕು. ಯಾರೂ ಬಣ್ಣದ ಬಟ್ಟೆಗಳನ್ನು ಧರಿಸದಿರುವಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದೆ. ಆದರೆ ಕಾಲೇಜಿನ ಸಮಾಜಶಾಸ್ತ್ರದ ಕುರಿತು ಏನು ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕು. ನ್ಯಾಯಾಲಯ ನೀಡಿದ ತೀರ್ಪನ್ನು ಸರ್ಕಾರ ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತೆ,
ಹಿಜಾಬ್ ವಿವಾದ ಕೆಲವರ ಹಿಡನ್ ಅಜೆಂಡಾ ಆಗಿರಬಹುದು ಎಂದರು.

ಹಿಜಾಬ್ ವಿವಾದ ಸೃಷ್ಟಿ ಕೆಲ ವಿದ್ಯಾರ್ಥಿನಿಯರ ಹಿಡನ್ ಅಜೆಂಡಾ ಇತ್ತೆಂಬ ಮಾತು ಕೇಳಿ ಬರುತ್ತಿದೆ, ಆ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ
ದುಷ್ಟ ಶಕ್ತಿಗಳು ಯಾವಾಗ್ಲೂ ಸಮಾಜ ಘಾತುಕ ಕೆಲಸಗಳನ್ನೇ ಮಾಡುತ್ತವೆ. ಕೆಲವರಿಗೆ ಸಮಾಜದ ಸ್ವಾಸ್ಥ್ಯ ಕೆಡಿಸುವುದೆ ಕೆಲಸವಾಗಿಬಿಟ್ಟಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಬೇಕು ಎಂದರು.

Share News

About admin

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *