Breaking News

ಮಾ. 4 ರಂದು ಸಿಎಂ ಚೊಚ್ಚಲ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದಾದ ನಂತರ ಸಂಘ ಸಂಸ್ಥೆಗಳ ಜೊತೆಗೆ ಸಭೆ ನಡೆಸಿ ಪ್ರಸ್ತಾವನೆ ಸ್ವೀಕರಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಫೆಬ್ರವರಿ 25ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ 4ರಂದು ಬಜೆಟ್ ಅಧಿವೇಶನ ಶುರುವಾಗಲಿದೆ ಎನ್ನಲಾಗಿದೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *