Breaking News

ವಿಭಿನ್ನ ರೀತಿಯಲ್ಲಿ ಚುನಾವಣೆ ಪ್ರಚಾರ ಮಾಡಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಹೆಲಿಕಾಪ್ಟರ್​ನಲ್ಲಿ ಕುಳಿತು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಮೂಲಕ ಹೊಸ ಮಾದರಿಯ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ.

ಉತ್ತರಾಖಂಡ ವಿಧಾನಸಭೆ ಚುನಾವಣೆ 2022 ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲು ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಉತ್ತರಾಖಂಡ್​ನ ಯಮುನೋತ್ರಿಗೆ ತೆರಳಬೇಕಿತ್ತು.ಆದರೆ ಹವಾಮಾನ ವೈಪರಿತ್ಯದಿಂದಾಗಿ ಶಿವರಾಜ್​ ಸಿಂಗ್​ ಚೌಹಾಣ್​ ಇದ್ದ ಹೆಲಿಕಾಪ್ಟ್​ ಟೇಕಾಫ್​ ಆಗದ ಕಾರಣ ಹೆಲಿಕಾಪ್ಟರ್​ನಲ್ಲಿಯೇ ಕುಳಿತುಕೊಳ್ಳಬೇಕಾಯ್ತು.

ನಿಗದಿತ ಸಮಯಕ್ಕೆ ಸ್ಥಳವನ್ನು ತಲುಪಲು ಸಾಧ್ಯವಾಗದ ಕಾರಣ ಅವರು ದೂರವಾಣಿ ಕರೆ ಮೂಲಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ಯಾವುದೇ ರಾಜಕೀಯ ನಾಯಕರು ಹೆಲಿಕಾಪ್ಟರ್​ನಲ್ಲಿ ಕುಳಿತು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದು ಭಾರತದ ಚುನಾವಣಾ ಇತಿಹಾಸದಲ್ಲಿಯೇ ಇದೆ ಮೊದಲಾಗಿದೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *