ಹುಬ್ಬಳ್ಳಿ:ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಾಯ ವಾಗುವಂತಹ ಕಾಲೇಜು ಹಾಗೂ ರೋಗಿಗಳ ಜೀವವನ್ನು ಕಾಪಾಡಬೇಕಾದ ಆಸ್ಪತ್ರೆ ನೀರ್ಮಾಣವಾಗ ಬೇಕಾದ ಸ್ಥಳದಲ್ಲಿ ಗಾಂಜಾ ಬೆಳೆದ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಕೆಎಲ್ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರ ಮಠ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಸ್ಥಳದಲ್ಲಿಯೇ ಗಾಂಜಾ ಬೆಳೆದ ಪ್ರಕರಣವನ್ನು ಕಸಬಾಪೇಟೆ ಠಾಣೆಯ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಎರಡ್ಮೂರು ತಿಂಗಳ ಹಿಂದೇನೆ ಗಾಂಜಾ ಬೆಳೆದಿದ್ದರೆಂದು ಗೊತ್ತಾಗಿದೆ. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಕಾರ್ಮಿಕರು ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದು, ಅಲ್ಲಿಯೇ ಗಾಂಜಾ ಬೆಳೆದಿದ್ದರಂತೆ. ಸುಮಾರು 2ಕೆಜಿಯಷ್ಟು ಹಸಿ ಗಾಂಜಾದ ಸಮೇತ ಐವರನ್ನ ಪೊಲೀಸರು ಬಂಧನ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

