ಬೆಂಗಳೂರು: ಪೋಲಿಸ್ ರು ಮಹಾದೇವ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನ್ಯಾಯಾಧೀಶರ ಮುಂದೆ ಸಂಜೆ ಅವರನ್ನು ಹಾಜರುಪಡಿಸುವ ನಿರೀಕ್ಷೆ ಇದೆ.
ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್ ಬಂಧಿಸಲಾಗಿದೆ. ಗಲಾಟೆ ಪ್ರಕರಣದ ಬಗ್ಗೆ ಎರಡು ದಿನದಿಂದ ಭಾರೀ ಚರ್ಚೆ ನಡೆಯುತ್ತಿತ್ತು.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ವಕೀಲರನ್ನು ಅವಾಚ್ಯಶಬ್ದಗಳಿಂದ ನಿಂದಿಸಿದ ಕೆ. ಎನ್. ಜಗದೀಶ್ ಮಹಾದೇವ್ ವಿರುದ್ಧ ಶನಿವಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್‌ಗೆ ದೂರ ನೀಡಿದ್ದರು.
ಕೋರ್ಟ್ ಆವರಣದಲ್ಲಿ ನಡೆದ ಗಲಾಡೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಪವಿತ್ರವಾದ ನ್ಯಾಯ ದೇವತೆಯ ಅಂಗಳದಲ್ಲಿ ಶಾಂತಿಯಿಂದ ಕಾರ್ಯ ನಿರ್ವಹಿಸಲು ವಕೀಲರಿಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





