Breaking News

ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ : ಸಿಎಂ ಬೊಮ್ಮಾಯಿ


ಹುಬ್ಬಳ್ಳಿ: ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ, ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವ್ಯವಸ್ಥೆಯನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜುಗಳನ್ನ ಆರಂಭಿಸುತ್ತೆವೆ. ಶಾಲಾ ಕಾಲೇಜುಗಳನ್ನ ಆರಂಭಿಸೋದು ನಮ್ಮ‌ ಮೊದಲ ಆಧ್ಯತೆವಾಗಿದೆ ಎಂದರು.

ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸುವವರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಯಾರು ಪ್ರಚೋದನೆ ನೀಡ್ತಾರೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶವನ್ನ ಹಾಕ್ತಾರೆ.
ಅವೆಲ್ಲವನ್ನೂ ನಮ್ಮ ಅಧಿಕಾರಿಗಳು ಗಮನಿಸುತ್ತಾರೆ.

ರಾಜ್ಯ ಬಜೆಟ್ ಮಂಡನೆ ವಿಚಾರಕ್ಕೆ
ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ ನಲ್ಲಿ ಅದಕ್ಕೆ ಬೂಸ್ಟ್ ಕೊಡೋ ಪ್ರಯತ್ನ ಮಾಡುತ್ತೇವೆ. ಸಮಗ್ರ ಕರ್ನಾಟಕದ ಅಭಿವೃದ್ದಿ ಚಿಂತನೆ ಇದೆ. ಆರ್ಥಿಕ‌ ಅಭಿವೃದ್ದಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದರು.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *