ಮೈಸೂರು: ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಎ.ಕೆ ಕಾಲೋನಿಯಲ್ಲಿ ನಡೆದಿದೆ.
ಸಂಧ್ಯಾ (23) ಕೊಲೆಯಾದ ದುರ್ದೈವಿ. ಪತಿ ಕಿರಣ್ (27) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.
ಸಂಧ್ಯಾ ಹಾಗೂ ಕಿರಣ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಿರಣ್ ಮೂರು ತಿಂಗಳು ಪುನರ್ವಸತಿ ಕೇಂದ್ರದಲ್ಲಿದ್ದು ಮತ್ತೆ ಮನೆಗೆ ವಾಪಸ್ ಆಗಿದ್ದ.ಇನ್ನು ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಪತ್ನಿ ಮೇಲೆ ಕೋಪಗೊಂಡ ಕಿರಣ್ ಆಕೆ ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

