ರಾಮನಗರ: ಬೆಟ್ಟದ ಕೊಳಕ್ಕೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ಬಳಿ ನಡೆದಿದೆ.
ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಿತ್ ತಡರಾತ್ರಿ ಮನೆಯಿಂದ ಹೋಗಿದ್ದ. ಪೋಷಕರು ನಾಪತ್ತೆ ದೂರಿನ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಸದ್ಯ ಈ ಪ್ರಕರಣ ಎಮ್ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

