Breaking News

ಉದ್ಯೋಗದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮನು (22) ಎಂಬಾತ ನೌಕರಿ ಸಿಗದಿದ್ದಕ್ಕೆ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.

ಈತ ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದು, ಯಾವುದೇ ನೌಕರಿ ಸಿಗದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕ್ರಿಮಿನಾಶಕ ಸೇವಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *