Breaking News

ಸರ್ಕಾರ ವಿರುದ್ಧ ಆರೋಪ ಮಾಡಿದ ಡಿಕೆಶಿ


ಗದಗ: ‘ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ.ಅಲ್ಲದೇ, ವಿವಾದ ರಾಜ್ಯದೆಲ್ಲೆಡೆ ವ್ಯಾಪಿಸಲು ಸರ್ಕಾರವೇ ಪ್ರೋತ್ಸಾಹ ನೀಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭಾನುವಾರ ಆರೋಪಿಸಿದರು.

‘ರಾಜ್ಯದಲ್ಲಿರುವಂತೆ ತಾಂತ್ರಿಕ, ಶೈಕ್ಷಣಿಕ, ಸಾಂಸ್ಕೃತಿಕ ಶ್ರೀಮಂತಿಕೆ ಬೇರೆಲ್ಲೂ ಇಲ್ಲ. ಇಂತಹ ವಾತಾವರಣದಲ್ಲಿ ಈಗ ವಿವಾದ ಹುಟ್ಟಿಕೊಂಡಿದೆ. ಬಿಜೆಪಿ ಸರ್ಕಾರದಿಂದಲೇ ರಾಜ್ಯಕ್ಕೆ ಕಪ್ಪುಚುಕ್ಕೆ ಬಿದ್ದಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಸಂವಿಧಾನ ಮತ್ತು ರಾಷ್ಟ್ರಧ್ವಜವೇ ಕಾಂಗ್ರೆಸ್‌ ಪಕ್ಷದ ಧರ್ಮ. ತಲೆಕೆಟ್ಟ ಕೆ.ಎಸ್.ಈಶ್ವರಪ್ಪ, ತ್ರಿವರ್ಣಧ್ವಜ ತೆಗೆದು ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಕಾಲ ನಿರ್ಮಾಣವಾಗಲಿದೆ ಎಂದಿದ್ದಾರೆ. ‘ರಾಷ್ಟ್ರಧ್ವಜ ಸ್ತಂಭಕ್ಕೆ ಯಾರು ಕೇಸರಿಧ್ವಜ ಕಟ್ಟಿದರು? ಸಿ.ಎಂ ಮಾತು ಆಡುತ್ತಿಲ್ಲ. ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದಾರೆಯೇ? ಈಶ್ವರಪ್ಪ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *