Breaking News

ಪ್ರತಾಪ್‌ ಸಿಂಹ ಹೇಳಿಕೆ ವಿರುದ್ಧ ಯು.ಟಿ. ಖಾದರ್ ವಾಗ್ದಾಳಿ


ಮೈಸೂರು: ಸಂಸದ ಪ್ರತಾಪ್‌ ಸಿಂಹನಂತಹ ಮೂರ್ಖ ಯಾರೂ ಇಲ್ಲ. ತಂದೆ ಮುಖ್ಯನಾ?, ತಾಯಿ ಮುಖ್ಯನಾ ಅಂತ ಕೇಳಲು ಆಗುತ್ತಾ. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಸಿಗುತ್ತಾ? ಊಟ ಬೇಕಾ?, ನೀರು ಬೇಕಾ ಅಂದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು. ಹಿಜಾಬ್ ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್‌ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.

ನೀವು ಪಾರಂಪರಿಕ, ಐತಿಹಾಸಿಕ‌ ಮೈಸೂರು ಸಂಸದರು. ಮೈಸೂರಿನ ಘನತೆ ಉಳಿಸಿ, ಅದಕ್ಕೆ ಕಪ್ಪುಚುಕ್ಕೆ ತರಬೇಡಿ. ಸಾಮಾನ್ಯವಾಗಿ ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ. ಆದರೆ ಸಂಸದ ಪ್ರತಾಪ್‌ಸಿಂಹ ಸಮಸ್ಯೆಗೆ ಪರಿಹಾರ ಸಿಕ್ಕಾಗ ಸಮಸ್ಯೆ ಸೃಷ್ಟಿ ಮಾಡುತ್ತಾರೆ ಎಂದು ಕಿಡಿಕಾರಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *