ಮೈಸೂರು: ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್ ನ್ಯೂ ನ್ಯಾಷನಲ್ ಪಾರ್ಟಿ ಅಧ್ಯಕ್ಷ ಅಯೂಬ್ ಖಾನ್ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಯೂಬ್ ಖಾನ್ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಕುರಿತು ಅವ ಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

