ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗವನ್ನು ಮಾಡಿ ಇಂದಿಗೆ ಮೂರು ವರ್ಷ ಕಳೆದಿದೆ. ಅದೆಷ್ಟು ಕುಟುಂಬಗಳು ಸಹ ಇಂದಿಗೂ ಯೋಧರ ನೆನಪಿನಲ್ಲಿಯೇ ತಮ್ಮಜೀವನವನ್ನು ಸಾಗುಸುತ್ತೀದ್ದಾರೆ. ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎ) ವಾಹನಗಳ ಸಾಲಿನ (ಕಾನ್ವಾಯ್) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್ಪಿಎ ಯೋಧರು ಹುತಾತ್ಮರಾದರು ಹಲವರು ಗಾಯಗೊಂಡಿದ್ದರು. ದೇಶ ಕಾಯುವ ಯೋಧರನ್ನು ಬಲಿತೆಗೆದುಕೊಂಡ ಈ ಘೋರ ಹತ್ಯಾಕಾಂಡಕ್ಕೆ ತಾನೇ ಹೊಣೆಯೆಂದು ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮದ್ ಭಯೋತ್ಪಾದಕ ಸಂಟನೆ ಹೇಳಿಕೊಂಡಿತು. ಈ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ಇದೆಯೆಂದು ಭಾರತ ಆಪಾದಿಸಿದ್ದು ಅದನ್ನು ‘ಪಾಪಿ’ಸ್ತಾನ ತಳ್ಳಿಹಾಕಿತು.
2019 ಫೆಬ್ರವರಿ 14ರ ಆ ದುದಿರ್ನ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾ ಎಂಬಲ್ಲಿ ಈ ಘೋರ ದುಷತ್ಯ ನಡೆಯಿತು. ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್ಪಿಎ ಜವಾನರ ಕಾನ್ವಾಯ್ ಮೇಲೆ ಒಬ್ಬ ಆತ್ಮಹತ್ಯಾ ಬಾಂಬರ್ ಎರಗಿ ಭೀಕರ ಸ್ಫೋಟಕ್ಕೆ ಕಾರಣವಾಗಿದ್ದ. ಪುಲ್ವಾಮಾ ದಾಳಿ ನಡೆಯುತ್ತಲೇ ಪಾಕ್ನ ಉನ್ನತ ರಾಯಭಾರಿಯನ್ನು ಕರೆಸಿಕೊಂಡ ಭಾರತ ಪ್ರಬಲ ಪ್ರತಿಭಟನೆಯನ್ನು ದಾಖಲಿಸಿತು. ದಾಳಿಗೆ ಪ್ರತಿಯಾಗಿ ಕಾರ್ಯಾಚರಣೆ ನಡೆಸುವ ಪೂರ್ಣ ಸ್ವಾತಂತ್ರ್ಯವನ್ನು ಭದ್ರತಾ ಪಡೆಗಳಿಗೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಉಗ್ರರ ಅಮಾನುಷ ಕೃತ್ಯಕ್ಕೆ ಇಡೀ ದೇಶದಲ್ಲಿ ಆಕ್ರೋಶದ ಅಲೆ ಎದ್ದಿತು.
ಬಾಲಾಕೋಟ್ ದಾಳಿ ಮೂಲಕ ಎದುರೇಟು ಉಗ್ರರ ಅಟ್ಟಹಾಸಕ್ಕೆ ಉತ್ತರ ನೀಡಲು ಭಾರತ ಸಂಕಲ್ಪ ಮಾಡಿತು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಬಾಲಾಕೋಟ್ನಲ್ಲಿರುವ ಜೈಷ್ ಉಗ್ರಗಾಮಿಗಳ ತಾಣಗಳ ಮೇಲೆ ಪುಲ್ವಾಮಾ ದಾಳಿಯ 12 ದಿನಗಳ ನಂತರ, ಅಂದರೆ ಫೆಬ್ರವರಿ 26ರಂದು ಭಾರತೀಯ ವಾಯುಪಡೆಯ ಫೈಟರ್ ವಿಮಾನಗಳು ನುಗ್ಗಿ ಬಾಂಬ್ ದಾಳಿ ನಡೆಸಿ ಶಿಬಿರಗಳನ್ನು ಉಧ್ವಸ್ತಗೊಳಿಸಿದವು.
bigtvnews | Hubli Dharwad News | Kannada News | Karnataka News Hubli News | News In Hubli | Local news

