ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್‍ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು.
ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಮತ್ತೆ ನಮ್ಮ ಪಕ್ಷಕ್ಕೆ ಬಂದೇ ಬರುತ್ತಾರೆ. ಇನ್ನೂ ಒಂದು ವರ್ಷ ಕಾಲಾವಕಾಶವಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

