ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ಕುರಿತು ಸೋಮವಾರ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನ ತ್ರಿಸದಸ್ಯ ವಿಸ್ತ್ರತ ಪೀಠ ವಿಚಾರಣೆಯನ್ನು ಮಂಗಳವಾರ ಮಧಾಹ್ನ 2.30 ಕ್ಕೆ ಮುಂದೂಡಿದೆ.
ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಫೆ 14 ಮಧ್ಯಾಹ್ನ 2.30ಕ್ಕೆ ಆರಂಭಿಸಿ ಸುದೀರ್ಘ ವಾದವನ್ನು ಆಲಿಸಿತು. ಆರ್ಟಿಕಲ್ 25 ಪ್ರಕಾರ ಶಿರವಸ್ತ್ರ ಧರಿಸುವುದು ತಪ್ಪಲ್ಲ ಎಂದು ಅರ್ಜಿದಾರ ವಿದ್ಯಾರ್ಥಿನಿಯರ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

