Breaking News

ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ : ನಿತೀಶ್ ಕುಮಾರ್


ಪಟ್ನಾ: ‘ಪ್ರತಿ ಧರ್ಮವನ್ನು ಮತ್ತು ಅವರ ಆರಾಧನೆಯ ಆಚರಣೆಗಳನ್ನು ಗೌರವಿಸುತ್ತೇನೆ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ರಚಿಸಿರುವ ಜೆಡಿಯು ವರಿಷ್ಠ, ಮುಖ್ಯಮಂತ್ರಿ ನಿತೀಶ್‌ ಅವರ ಈ ಹೇಳಿಕೆಯು ಕರ್ನಾಟಕದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಮುಖ್ಯತೆ ಪಡೆದಿದೆ.
‘ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ. ಈ ವಿಷಯದಲ್ಲಿ ನಮ್ಮದೇನೂ ಆಕ್ಷೇಪಗಳಿಲ್ಲ. ಅಂತಹ ಯಾವ ವಿವಾದಗಳೂ ಬಿಹಾರದಲ್ಲಿಲ್ಲ’ ಎಂದು ನಿತೀಶ್‌ ಹೇಳಿದ್ದಾರೆ.

ಬಿಹಾರದ ಶಾಲೆಗಳಲ್ಲಿ ಮಕ್ಕಳು ಒಂದೇ ರೀತಿಯ ಬಟ್ಟೆ ಧರಿಸುತ್ತಾರೆ. ನಾವು ಪರಸ್ಪರರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ. ಅವರ ಧರ್ಮ ಅಥವಾ ಸಂಸ್ಕೃತಿಯ ಆಚರಣೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದ್ದರಿಂದಲೇ ಇಂತಹ ವಿಷಯಗಳತ್ತ ಗಮನ ಹರಿಸುವುದಿಲ್ಲ ಎಂದಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *